5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಇಲ್ಲ: ಸಚಿವ ನಾಗೇಶ್

5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಇಲ್ಲ: ಸಚಿವ ನಾಗೇಶ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ನಡೆಸುವಂತೆ ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಉದ್ದೇಶವಿಲ್ಲ. ಇದಕ್ಕೆ ಪರ್ಯಾಯವಾಗಿ ಬೇರೆ ಮಾದರಿಯ ಪರೀಕ್ಷೆ ನಡೆಸುವ ಚಿಂತನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. 

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಕ್ಷಣದ ಗುಣಮಟ್ಟ ಹೆಚ್ಚಿಸಲು 5 ಮತ್ತು 8 ನೇ ತರಗತಿಗೆ ಪರ್ಯಾಯವಾಗಿ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆಯಾಗಿದೆ. ಇದು ಎಸ್ಎಸ್ ಎಲ್ ಸಿ ಮಾದರಿಯ ಬೋರ್ಡ್ ಪರೀಕ್ಷೆ ಆಗಿರುವುದಿಲ್ಲ. ಅಕ್ಟೋಬರ್ 13 ರಂದುಉ ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. 

ಬೋರ್ಡ್ ಪರೀಕ್ಷೆ ಮಾದರಿಯಲ್ಲದೆ ಪರ್ಯಾಯವಾಗಿ ಮಕ್ಕಳ ಕಲಿಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಯೋಚಿಸಲಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ 5 ನೇ ತರಗತಿಗೆಪರ್ಯಾಯ ಪರೀಕ್ಷೆ ನಡೆಸಲು ಚಿಂತನೆ ಇದೆ ಎಂದು ತಿಳಿಸಿದ್ದಾರೆ.