ಸೋಮವಾರ ರಜೆ ಇಲ್ಲ - ಮುಖ್ಯಮಂತ್ರಿ ಸಿದ್ದರಾಮಯ್ಯ

ತುಮಕೂರು : ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ಸೋಮವಾರ ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರದಿಂದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆ 12000 ರೂ.ಗಳೊಂದಿಗೆ 1500 ರೂ. ಗಳನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ, ಒಟ್ಟು ನಮ್ಮ ಸರ್ಕಾರದಿಂದ ಕ್ವಿಂಟಾಲಿಗೆ 1500 ರೂ.ಗಳನ್ನು ಒದಗಿಸಲಾಗುವುದು. 3000 ರೂ.ಗಳಿಗೆ ಬೇಡಿಕೆ ಇದ್ದರೂ ಸರ್ಕಾರದ ತನ್ನ ಶಕ್ತಾನುಸಾರ ಬೆಂಬಲ ಬೆಲೆ ನೀಡುತ್ತಿದೆ,ಎಂ.ಎಸ್.ಪಿ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ಎಂದರು.
ಹಿಂದಿನ ಸರ್ಕಾರ ಜನವರಿ 21 ನ್ನು ದಾಸೋಹ ದಿನ ಎಂದು ಆಚರಿಸಲು ಘೋಷಣೆ ಮಾಡಿದ್ದರ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು ಯಾವಾಗ ಮಾಡಿದರು, ಯಾವ ಸಂದರ್ಭದಲ್ಲಿ ಹಾಗೂ ಯಾಕಾಗಿ ಮಾಡಿದರು ಎಂದು ನನಗೆ ತಿಳಿದಿಲ್ಲ, ವಿಚಾರ ಮಾಡಲಾಗುವುದು ಎಂದರು.