ಲಾಕ್ ಡೌನ್ ಮಾಡುವ ಪ್ರಸ್ತಾಪ ಇಲ್ಲ, ಶಾಲೆ ಮುಚ್ಚುವುದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ದಾವಣಗೆರೆ: ಲಾಕ್ ಡೌನ್ ಮಾಡುವಂತಹ ಯಾವುದೇ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಪಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜನರು ಆತಂಕಪಡುವ ಅಗತ್ಯವಿಲ್ಲ. ಶಾಲೆಗಳನ್ನು ನಾವು ಮುಚ್ಚುವಂತೆ ಹೇಳಿಲ್ಲ. ಕೇವಲ ನಿಗಾ ವಹಿಸುವಂತೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು. ಕೊರೊನಾ ಸೋಂಕಿನ ರೂಪಾಂತರಿ ತಳಿಯ ಬಗ್ಗೆ ಭಯಪಡುವ ಅವಶ್ಯಕತೆ ಇಲ್ಲ. ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕು ಅಷ್ಟೇ. ಕೊರೊನಾ ಮಾರ್ಗಸೂಚಿಯನ್ನು ಎಲ್ಲರೂ ಪಾಲಿಸಬೇಕು. ಇದು ನಮ್ಮ ಮುಂದಿರುವ ದಾರಿ. ದಕ್ಷಿಣ ಆಫ್ರಿಕಾದಿಂದ ಬಂದಿರುವ ವ್ಯಕ್ತಿಯೊಬ್ಬರಲ್ಲಿ ಓಮ್ರಿಕಾನ್ ಸೋಂಕಿನ ಗುಣಲಕ್ಷಣ ಕಂಡು ಬಂದಿದ್ದು, ಸತ್ಯತೆ ತಿಳಿಯಲು ರಿಪೋರ್ಟ್ ಕಳುಹಿಸಲಾಗಿದೆ. ಇದು ಬಂದ ಬಳಿಕವಷ್ಟೇ ಗೊತ್ತಾಗಲಿದೆ ಎಂದರು. ಆರೋಗ್ಯ ಇಲಾಖೆ ಸಿಬ್ಬಂದಿ ಈಗಾಗಲೇ ಎರಡು ಡೋಸ್ ಗಳನ್ನು ಪಡೆದಿದ್ದಾರೆ. "ಪಿಸ್ಟೋ'' ಡೋಸ್ ಬಗ್ಗೆ ಕೇಂದ್ರ ಸರ್ಕಾರದ ಸೂಚನೆ ಕಾಯುತ್ತಿದ್ದೇವೆ. ಅಲ್ಲಿಂದ ಬಂದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಆರೋಗ್ಯ ಕಾರ್ಯಕರ್ತರ ಬಗ್ಗೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ ಎಂದು ಹೇಳಿದರು.