ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ ಅಂಜಾರಿಯಾ ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ ಅಂಜಾರಿಯಾ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನಚಂದ್ರ ಅಂಜಾರಿಯಾ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ 'ಗಾಜಿನ ಮನೆ'ಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. 

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜ್, ಮಾಜಿ ಕೇಂದ್ರ ಸಚಿವ ಡಾ.ಎಂ. ವೀರಪ್ಪ ಮೊಯ್ಲಿ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ.ಶಾಲಿನಿ ರಜನೀಶ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಗಣ್ಯರು, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.