ಅ.20 ರಂದು ಅಣ್ಣಿಗೇರಿಯಲ್ಲಿ ಜಿಲ್ಲಾಧಿಕಾರಿಗಳಿಂದ ತಾಲೂಕಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ

ಅ.20 ರಂದು ಅಣ್ಣಿಗೇರಿಯಲ್ಲಿ ಜಿಲ್ಲಾಧಿಕಾರಿಗಳಿಂದ ತಾಲೂಕಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ

ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಅಕ್ಟೋಬರ್ 20 ರಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಹಿನ್ನೆಲೆಯಲ್ಲಿ ಅಣ್ಣಿಗೇರಿ ತಾಲೂಕಾಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಅಣ್ಣಿಗೇರಿ ಪಟ್ಟಣದ ಪಂಪ ಭವನದಲ್ಲಿ ಆಯೋಜಿಸಲಾಗಿದೆ. 

ಅ.20 ರ ಜನತಾ ದರ್ಶನಕ್ಕೆ ಅಣ್ಣಿಗೇರಿ ತಾಲೂಕಿನ ಸಾರ್ವಜನಿಕರಿಂದ ಅ.18 ಮತ್ತು 19 ರಂದು ಅಣ್ಣಿಗೇರಿ ತಹಶೀಲ್ದಾರ ಕಚೇರಿಯಲ್ಲಿ ಅಹವಾಲು, ಕುಂದುಕೊರತೆಗಳ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಮತ್ತು ಅ.20 ರಂದು ಜನತಾ ದರ್ಶನ ಸ್ಥಳದಲ್ಲಿಯೂ ಸಹ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ಅಣ್ಣೀಗೇರಿ ತಹಶೀಲ್ದಾರ ಶಿವಾನಂದ ಹೆಬ್ಬಳ್ಳಿ ಅವರು ಈ ಕಾರ್ಯಕ್ರಮದ ಸಮನ್ವಯ ಮಾಡಲಿದ್ದಾರೆ. 

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಅ.20 ರ ಬೆಳಿಗ್ಗೆ 10 ಗಂಟೆಯಿಂದ ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸಲಿದ್ದು, ಅಣ್ಣಿಗೇರಿ ತಾಲೂಕಿನ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು, ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಪಡೆಯಬಹುದೆಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.