ಆಗಸ್ಟ್ 18 ರಂದು ಧಾರವಾಡಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ

ಆಗಸ್ಟ್ 18 ರಂದು ಧಾರವಾಡಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ

ಧಾರವಾಡ : ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಆಗಸ್ಟ್ 18 ರಂದು ಧಾರವಾಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಸಚಿವರು ಆಗಸ್ಟ್ 18 ರಂದು ಬೆಂಗಳೂರಿನಿಂದ ಆಗಮಿಸುತ್ತಾರೆ. ಬೆಳಿಗ್ಗೆ 11-45 ಗಂಟೆಗೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿ, ಮಧ್ಯಾಹ್ನ 12 ಗಂಟೆಗೆ ಪೊಲೀಸ್ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. 

ನಂತರ ಮಧ್ಯಾಹ್ನ 2-50 ಗಂಟೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ, ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತಾಲಯದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ನಂತರ ಸಚಿವರು ರಾತ್ರಿ 9-40 ಕ್ಕೆ ಹುಬ್ಬಳ್ಳಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.