ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಮೊದಲ ದಿನ ಒಂದು ನಾಮಪತ್ರ ಸಲ್ಲಿಕೆ

ಧಾರವಾಡ : ಧಾರವಾಡ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮೊದಲ ದಿನವಾದ ಶುಕ್ರವಾರ ಒಂದು ನಾಮಪತ್ರ ಸಲ್ಲಿಕೆ ಆಗಿದೆ.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಗಪ್ಪ ಕರೆಣ್ಣವರ ಅವರು ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲಾ ಚುನಾವಣಾ ಅಧಿಕಾರಿಯೂ ಆದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ನಾಗಪ್ಪ ಕರೆಣ್ಣವರ ಅವರು ಇಂದು ತಮ ಉಮೇದುವಾರಿಕೆ ಸಲ್ಲಿಸಿದರು.