ದೆಹಲಿ ನೂತನ ಉಪ ಮುಖ್ಯಮಂತ್ರಿಯಾಗಿ ಪರ್ವೇಶ್ ವರ್ಮಾ ಆಯ್ಕೆ

ದೆಹಲಿ ನೂತನ ಉಪ ಮುಖ್ಯಮಂತ್ರಿಯಾಗಿ ಪರ್ವೇಶ್ ವರ್ಮಾ ಆಯ್ಕೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದೆ. ರೇಖಾ ಗುಪ್ತಾ ಮತ್ತು ಪರ್ವೇಶ್ ವರ್ಮಾ ಅವರು ದೆಹಲಿ ಸಿಎಂ ರೇಸ್‌ನಲ್ಲಿದ್ದರು. ಅಂತಿಮವಾಗಿ ರೇಖಾ ಗುಪ್ತಾ ಅವರು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ. ಇನ್ನು ಹಿರಿಯ ಮುಖಂಡ ಪರ್ವೇಶ್ ವರ್ಮಾ ಅವರನ್ನು ಹೊಸ ಉಪಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ. 

 

2025ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪರ್ವೇಶ್ ವರ್ಮಾ ಅವರು ನವದೆಹಲಿ ಸ್ಥಾನದಿಂದ ಎಎಪಿಯ ಅರವಿಂದ್ ಕೇಜ್ರಿವಾಲ್ ಅವರನ್ನ ಸೋಲಿಸುವ ಮೂಲಕ ಗಮನಾರ್ಹ ವಿಜಯವನ್ನ ಗಳಿಸಿದರು. ವರ್ಮಾ ಸುಮಾರು 30 ವರ್ಷಗಳಿಂದ ಬಿಜೆಪಿಯೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ. ಅವರು ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಉಪಾಧ್ಯಕ್ಷ ಸಾಹಿಬ್ ಸಿಂಗ್ ವರ್ಮಾ ಅವರ ಪುತ್ರ. ಅವರ ಚಿಕ್ಕಪ್ಪ ಆಜಾದ್ ಸಿಂಗ್ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ನ ಮೇಯರ್ ಆಗಿದ್ದರು ಮತ್ತು ಮುಂಡ್ಕಾದಿಂದ ಬಿಜೆಪಿ ಟಿಕೆಟ್ನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ವರ್ಮಾ ಪಶ್ಚಿಮ ದೆಹಲಿಯಿಂದ ಎರಡು ಬಾರಿ ಸಂಸತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಮೆಹ್ರೌಲಿಯನ್ನು ಶಾಸಕರಾಗಿಯೂ ಪ್ರತಿನಿಧಿಸಿದ್ದಾರೆ. 2013ರಲ್ಲಿ ಮೆಹ್ರೌಲಿಯಿಂದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಅವರ ರಾಜಕೀಯ ಪಯಣ ಆರಂಭವಾಯಿತು.