ಭಾರತೀಯ ವೈದ್ಯಕೀಯ ಪದ್ಧತಿಗೆ ಪತಂಜಲಿ ಅಪಖ್ಯಾತಿ ತಂದಿದೆ : ಉತ್ಪನ್ನ ಪರೀಕ್ಷೆಗೆ ಸೂಚನೆ ಕೊಟ್ಟ ಗುಂಡೂರಾವ್

ಭಾರತೀಯ ವೈದ್ಯಕೀಯ ಪದ್ಧತಿಗೆ ಪತಂಜಲಿ ಅಪಖ್ಯಾತಿ ತಂದಿದೆ : ಉತ್ಪನ್ನ ಪರೀಕ್ಷೆಗೆ ಸೂಚನೆ ಕೊಟ್ಟ ಗುಂಡೂರಾವ್

ಬೆಂಗಳೂರು : ಪತಂಜಲಿ ಕಂಪನಿಯ ‘ಆಯುರ್ವೇದ’ ಉತ್ಪನ್ನಗಳಿಗೆ ರೋಗಗಳನ್ನು ಗುಣಪಡಿಸುವ ಶಕ್ತಿಯಿದೆ ಎಂಬ ಸುಳ್ಳು ಜಾಹೀರಾತುಗಳನ್ನು ಪ್ರಸಾರ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಕಂಪನಿಯ ಪ್ರವರ್ತಕರಾದ ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರನ್ನು ಮತ್ತೊಮ್ಮೆ ಸುಪ್ರೀಂಕೋರ್ಟ್‌ ತೀವ್ರವಾಗಿ ತರಾಟೆ ತೆಗೆದುಕೊಂಡಿದೆ. 

ಇತ್ತ ಸಿದ್ದರಾಮಯ್ಯ ಸರ್ಕಾರ ಕೂಡಾ ಪತಂಜಲಿ ವಿರುದ್ಧ ಅಸಮಾಧಾನ ಹೊರಹಾಕಿ ತನ್ನ ನಿಲುವು ಪ್ರಕಟಿಸಿದೆ. ಬಾಬಾ ರಾಮ್‌ದೇವ್ ಮತ್ತು ಅವರ ಪತಂಜಲಿ ಕಂಪನಿ ಮಾಡಿರುವ ಘೋರ ವಂಚನೆ ಅಕ್ಷಮ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ. 

ಆಯುರ್ವೇದ ಮತ್ತು ಭಾರತೀಯ ವೈದ್ಯಕೀಯ ಪದ್ಧತಿಗೆ ಪತಂಜಲಿ ಅಪಖ್ಯಾತಿ ತಂದಿದ್ದಾರೆ. ಆರೋಗ್ಯ, ವ್ಯಾಪಾರ ಅಥವಾ ರಾಜಕೀಯದಲ್ಲಿ ಕುರುಡು ನಂಬಿಕೆಯನ್ನು ಹೊಂದಿರುವ ಇಂತಹದ್ದು ಎಂದು ದಿನೇಶ್ ಕುಟುಕಿದ್ದಾರೆ. ಮುಖ್ಯವಾಗಿ ಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟವನ್ನು ಪರೀಕ್ಷಿಸಲು ನನ್ನ ಡ್ರಗ್ಸ್ ಕಂಟ್ರೋಲ್ ಡಿಪಾರ್ಟ್ಮೆಂಟ್ ಮತ್ತು ಆಯುಷ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.