ಬ್ರೇಕಿಂಗ್ : ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಇಳಿಕೆ

ದೆಹಲಿ : ದುಬಾರಿ ದುನಿಯಾದಲ್ಲಿ ಜೀವನ ನಡೆಸಲು ಹೆಣಗಾಡುತ್ತಿರುವ ಜನತೆಗೆ ಕೇಂದ್ರದಿಂದ ಗುಡ್ ನ್ಯೂಸ್ ಒಂದು ದೊರೆತಿದೆ. ಪೆಟ್ರೋಲ್,ಡಿಸೇಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿರುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಪೆಟ್ರೋಲ್ ಮೇಲೆ 8 ರೂ. ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 6 ರೂ. ಕಡಿಮೆ ಮಾಡಿದೆ. ಇದರಿಂದಾಗಿ ಪೆಟ್ರೋಲ್ 9.5 ರೂ ಕಡಿಮೆ ಆದ್ರೆ, ಡೀಸೆಲ್ ಬೆಲೆ 7 ರೂ. ಕಡಿಮೆ ಆಗಲಿದೆ.