ಬೆಂಗಳೂರು: ಪಿ.ಜಿ ಆಯುಷ್‌ - ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು: ಪಿ.ಜಿ ಆಯುಷ್‌ - ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು: ಪಿಜಿ ಆಯುಷ್‌ - 2024 ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ. 

ಆಕ್ಷೇಪಣೆಗಳನ್ನು ನೋಡಿಕೊಂಡು ಮಂಗಳವಾರ (ನವೆಂಬರ್ 12) ಮಧ್ಯಾಹ್ನ 2 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ಅಭ್ಯರ್ಥಿಗಳು, ಪೋಷಕರ ಜತೆ ಚರ್ಚಿಸಿ, ಚಾಯ್ಸ್‌ ದಾಖಲಿಸಬೇಕು. ನಂತರ ಶುಲ್ಕ ಪಾವತಿಸಿ ಕಾಲೇಜಿಗೆ ವರದಿ ಮಾಡಿಕೊಳ್ಳಲು ನವೆಂಬರ್ 13ರವರೆಗೆ ಅವಕಾಶ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.ಹೆಚ್ಚಿನ ವಿವರಗಳಿಗೆ ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಬೇಕು ಎಂದಿದ್ದಾರೆ.