ಕೇಜ್ರಿವಾಲ್‌ರನ್ನು ಸಿಎಂ ಸ್ಥಾನದಿಂದ ವಜಾಗೊಳಿಸುವಂತೆ ಸಲ್ಲಿಸಿದ್ದ PIL ತಿರಸ್ಕಾರ

ಕೇಜ್ರಿವಾಲ್‌ರನ್ನು ಸಿಎಂ ಸ್ಥಾನದಿಂದ ವಜಾಗೊಳಿಸುವಂತೆ ಸಲ್ಲಿಸಿದ್ದ PIL ತಿರಸ್ಕಾರ

ನವದೆಹಲಿ: ಅಬಕಾರಿ ಮದ್ಯ‌ ನೀತಿ ಹಗರಣದಲ್ಲಿ ಆರೋಪಿಯಾಗಿ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಸಿಎಂ ಕೇಜ್ರಿವಾಲ್ ಬಂಧಿತರಾಗಿದ್ದಾರೆ. 

ಈ ವೇಳೆ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. 

'ಕೆಲವೊಮ್ಮೆ ವೈಯಕ್ತಿಕ ಹಿತಾಸಕ್ತಿಗಿಂತ ರಾಷ್ಟ್ರೀಯ ಹಿತಾಸಕ್ತಿ ಮುಖ್ಯವಾಗಿರಬೇಕು. ನ್ಯಾಯಾಲಯವಾಗಿ ನಾವು ಕಾನೂನಿನ ಚೌಕಟ್ಟಿನೊಳಗೆ ಹೋಗಬೇಕು. ನೀವು ಹೇಳಿದಂತೆ ಪರಿಹಾರ ನೀಡಲು ಸಾಧ್ಯವಿಲ್ಲ‌. ಹಾಗಾಗಿ ನೀವು ಕಾನೂನಿನ ಚೌಕಟ್ಟಿನೊಳಗೆ ಸೂಕ್ತವಾದ ಕಾನೂ‌ನು ಪ್ರಾಧಿಕಾರ ಅಥವಾ ವೇದಿಕೆ ಮುಂದೆ ಹೋಗಬೇಕು' ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪಿ.ಎಸ್ ಅರೋರಾ ಅವರಿದ್ದ ಪೀಠ ಸೂಚಿಸಿದೆ‌.