ಧಾರವಾಡ: ಪ್ರಹ್ಲಾದ ಜೋಶಿ ನಾಳೆ ನಾಮಪತ್ರ ಸಲ್ಲಿಕೆ - ರಾಜಾಹುಲಿ ಸಾಥ್

ಧಾರವಾಡ: ಪ್ರಹ್ಲಾದ ಜೋಶಿ ನಾಳೆ ನಾಮಪತ್ರ ಸಲ್ಲಿಕೆ - ರಾಜಾಹುಲಿ ಸಾಥ್

ಧಾರವಾಡ: ಹಾಲಿ ಸಂಸದರು, ಕೇಂದ್ರ ಸಚಿವರೂ ಆಗಿರುವ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು ನಾಳೆ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಈ ನಾಮಪತ್ರ ಸಲ್ಲಿಕೆಗೆ ಸಾಥ್ ನೀಡಲಿದ್ದಾರೆ. 

ಧಾರವಾಡದ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ಬೃಹತ್ ಮೆರವಣಿಗೆ ಮೂಲಕ ಪ್ರಹ್ಲಾದ ಜೋಶಿ ಅವರು ಧಾರವಾಡದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಲಿದ್ದಾರೆ. 

ಈ ಬೃಹತ್ ಮೆರವಣಿಗೆಯಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಜನ ಹಾಗೂ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಶಿವಾಜಿ ವೃತ್ತದಿಂದ ತೆರೆದ ವಾಹನದ ಮೂಲಕ ಮೆರವಣಿಗೆ ನಡೆಯಲಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ನಾಯಕರು ಹಾಗೂ ಬಿಜೆಪಿಯ ಮಾಜಿ ಶಾಸಕರು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.