ಚೆಸ್ ಮಾಸ್ಟರ್ ಮ್ಯಾಗ್ನಸ್ ಕಾರ್ಲ್‌ಸನ್‌ರನ್ನು ಸೋಲಿಸಿ ಚಾಂಪಿಯನ್ ಆದ ಪ್ರಜ್ಞಾನಂದ

ಓಸ್ಲೋ: ಭಾರತದ ಹೆಮ್ಮೆ ಚೆಸ್ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಅವರು ವಿಶ್ವದ ನಂ.1 ಚೆಸ್ ಮಾಸ್ಟರ್ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು ಸೋಲಿಸಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.
ನಾರ್ವೆ ಚೆಸ್ ಟೂರ್ನಿಯ 3ನೇ ಸುತ್ತಿನಲ್ಲಿ ಪ್ರಜ್ಞಾನಂದ ಈ ಸಾಧನೆ ಮಾಡಿದ್ದಾರೆ. 6 ಬಾರಿ ವಿಶ್ವ ಚೆಸ್ ಚಾಂಪಿಯನ್ ಕಾರ್ಲ್‌ಸನ್ ವಿರುದ್ಧ ಪ್ರಜ್ಞಾನಂದಗೆ ಇದು ಮೊದಲ ಜಯವಾಗಿದೆ. ಪ್ರಜ್ಞಾನಂದ 5.5 ಪಾಯಿಂಟ್‌ಗಳೊಂದಿಗೆ ಮೊದಲ ಸ್ಥಾನ ಪಡೆದರೆ, ಕಾರ್ಲ್‌ಸನ್ 3 ಪಾಯಿಂಟ್‌ಗಳೊಂದಿಗೆ 5ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಹಿಂದಿನ ವರ್ಷ ಅಝರ್ಬೈಜಾನ್ನ ಬಾಕುವಿನಲ್ಲಿ ನಡೆದಿದ್ದ ಚೆಸ್ ವಿಶ್ವಕಪ್‌ನ ಫೈನಲ್ ಟೈ ಬ್ರೇಕರ್ ಸುತ್ತಿನಲ್ಲಿ ಪ್ರಜ್ಞಾನಂದ ವಿರುದ್ಧವೇ ಗೆಲುವು ಸಾಧಿಸಿ ಮ್ಯಾಗ್ನಸ್ ಕಾರ್ಲ್‌ಸೆನ್ 6ನೇ ಬಾರಿಗೆ ಚಾಂಪಿಯನ್ ಆಗಿದ್ದರು. ಆದರೆ, ಈ ಬಾರಿ ಭಾರತೀಯ ಆಟಗಾರ ಪ್ರಜ್ಞಾನಂದ ಸೇಡು ತೀರಿಸಿಕೊಂಡಿದ್ದಾರೆ.
ಮಹಿಳಾ ವಿಭಾಗದಲ್ಲಿ ಯುವ ಆಟಗಾರ್ತಿ, ಪ್ರಜ್ಞಾನಂದ ಅವರ ಸಹೋದರಿ, ಗ್ರ್ಯಾಂಡ್‌ಮಾಸ್ಟರ್ ಆರ್.ವೈಶಾಲಿ ಕೂಡ ಮುನ್ನಡೆ ಸಾಧಿಸಿದ್ದಾರೆ. ಮತ್ತೋರ್ವ ಭಾರತೀಯ ಆಟಗಾರ್ತಿ ಕೋನೇರು ಹಂಪಿ ಅವರನ್ನು ಸೋಲಿಸಿ ನಾರ್ವೆ ಚೆಸ್ ಟೂರ್ನಿಯ ನಂತರ ಮಹಿಳಾ ವಿಭಾಗದಲ್ಲಿ ಅಗ್ರಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.