ಹುಬ್ಬಳ್ಳಿಯಲ್ಲಿ ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಹುಬ್ಬಳ್ಳಿಯಲ್ಲಿ ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಇಂದು ಹುಬ್ಬಳ್ಳಿ ಆರ್‌ಎನ್ ಶಟ್ಟಿ ಕಲ್ಯಾಣ ಮಂಟಪದಲ್ಲಿ ನೆರೆವೇರಿತು. 

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಕೆ‌.ವಿ ಪ್ರಭಾಕರ, ಮುಖ್ಯಮಂತ್ರಿ ಮಾಧ್ಯಮ ಸಂಯೋಜಕರು, ಕ.ಕಾ.ನಿ.ಪ ಸಂಘದ ಅಧ್ಯಕ್ಷ ಶಿವಾನಂದ ತಗಡೂರ, ಕ.ಕಾ.ನಿ.ಪ ಸಂಘದ ಉಪಾಧ್ಯಕ್ಷ ಪುಂಡಲಿಕ ಬಾಳೋಜಿ, ಕ.ಕಾ.ನಿ.ಪ ಕಾರ್ಯಕಾರಿಣಿ ಸದಸ್ಯ ಗಣಪತಿ ಗಂಗೋಳಿ, ಧಾರವಾಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಚನೇಶ ಹೂಗಾರ ಸೇರಿದಂತೆ ಹಲವಾರು ಹಿರಿಯ ಪತ್ರಕರ್ತರು ಇದ್ದರು.