ದೇಶದಲ್ಲಿ ಕ್ರಿಪ್ಟೋಕರೆನ್ಸಿ ಅಪಾಯದ ಬಗ್ಗೆ ಪ್ರಧಾನಿ ನೇತೃತ್ವದಲ್ಲಿ ಚರ್ಚೆ

ನವದೆಹಲಿ: ದೇಶದಲ್ಲಿ ಕ್ರಿಪ್ಟೋಕರೆನ್ಸಿ ಹಾಗೂ ಸಂಬಂಧಿತ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಈ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಶನಿವಾರ ಕ್ರಿಪ್ಟೋಕರೆನ್ಸಿ ಮತ್ತು ಸಂಬಂಧಿತ ವಿಷಯಗಳ ಕುರಿತು ಉನ್ನತ ಮಟ್ಟದ ಸಭೆಯ ನಡೆಸಲಾಯಿತು. ಅನಿಯಂತ್ರಿತ ಕ್ರಿಪ್ಟೋ ಮಾರುಕಟ್ಟೆಗಳು ಮನಿ ಲಾಂಡರಿಂಗ್ ಮತ್ತು ಭಯೋತ್ಪಾದನೆಗೆ ಹಣಕಾಸು ಒದಗಿಸುವ ಮಾರ್ಗಗಳಾಗಿ ಬದಲಾಗುತ್ತಿರುವ ಬಗ್ಗೆ ಪ್ರಮುಖ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. "ಅತಿಯಾದ ಭರವಸೆ ಮತ್ತು ಪಾರದರ್ಶಕವಲ್ಲದ ಜಾಹೀರಾತು" ಮೂಲಕ ಯುವಕರನ್ನು ದಾರಿ ತಪ್ಪಿಸುವ ಪ್ರಯತ್ನಗಳನ್ನು ತಡೆಯುವ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು ತಿಳಿದು ಬಂದಿದೆ.