ಡಿ.10ಕ್ಕೆ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ

ಧಾರವಾಡ: ಡಿ.10ಕ್ಕೆ ಸ್ಥಳೀಯ ಸಂಘ, ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟಕ್ಕೆ ಒಂದು ದಿನ ಬ್ರೇಕ್ ನೀಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಹಾಗೂ ಚುನಾವಣೆ ಶಾಂತಿಯುತವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಡಿ.10 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯದ ಅಂಗಡಿ, ಪಬ್, ಬಾರ್, ಮದ್ಯ ತಯಾರಿಕಾ ಘಟಕಗಳನ್ನು ಬಂದ್ ಮಾಡಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.