ಬೆಂಗಳೂರು : ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ - ಸಿಎಂಗೆ ವರದಿ ಸಲ್ಲಿಸಿದ ನ್ಯಾ.ಬಿ.ವೀರಪ್ಪ

ಬೆಂಗಳೂರು : ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ - ಸಿಎಂಗೆ ವರದಿ ಸಲ್ಲಿಸಿದ ನ್ಯಾ.ಬಿ.ವೀರಪ್ಪ

ಬೆಂಗಳೂರು : ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. 

ಕಳೆದ ವರ್ಷ ಕೆಪಿಎಸ್‌ಸಿ ವತಿಯಿಂದ 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯಲ್ಲಿ ಅಕ್ರಮ ನಡೆಸಲಾಗಿತ್ತು. ಇದರಲ್ಲಿ 52 ಅಭ್ಯರ್ಥಿಗಳು ಶಾಮೀಲಾಗಿದ್ದುದು ಮೇಲ್ನೋಟಕ್ಕೆ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ ಈ ಪ್ರಕರಣ ಸಮಗ್ರ ತನಿಖೆಯಾಗಬೇಕೆಂದು ನಿರ್ಧರಿಸಿ ಹೈಕೋರ್ಟ್ ನ ನಿವೃತ್ತ ನ್ಯಾ.ಬಿ.ವೀರಪ್ಪ ನೇತೃತ್ವದ ಏಕ ಸದಸ್ಯ ಆಯೋಗ ರಚಿಸಿ ಕಳೆದ ಜುಲೈ ತಿಂಗಳಲ್ಲಿ ತನಿಖೆಯ ಹೊಣೆ ಹೊರೆಸಿತ್ತು. 

ಅಂದಿನಿಂದ ತನಿಖೆ ನಡೆಸಿದ್ದ ನ್ಯಾ.ಬಿ.ವೀರಪ್ಪ ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣದ ತನಿಖಾ ಕಾರ್ಯವನ್ನು ಪೂರ್ಣಗೊಳಿಸಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ವರದಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ನಸೀರ್ ಅಹಮದ್ ಉಪಸ್ಥಿತರಿದ್ದರು.