ಫೆ.21 ರಿಂದ ಪಿಯು ಪ್ರಾಯೋಗಿಕ ಪರೀಕ್ಷೆ : ಹಿಜಾಬ್ ವಿವಾದದಿಂದ ಗೈರಾದರೆ ಮತ್ತೆ ಅವಕಾಶವಿಲ್ಲ

ಬೆಂಗಳೂರು: ಫೆ.21 ರಿಂದ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆ ಆರಂಭವಾಗಲಿದೆ. ಪಿಯು ಬೋರ್ಡ್ ಈಗಾಗಲೇ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿದ್ದು ರಾಜ್ಯದ ಬಹುತೇಕ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ. ಇನ್ನು ಹಿಜಾಬ್ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೆ ಪರೀಕ್ಷೆಗೆ ಅವಕಾಶ ಇಲ್ಲ ಎಂದು ಪಿಯು ಬೋರ್ಡ್ ತಿಳಿಸಿರುವುದು ವಿದ್ಯಾರ್ಥಿನಿಯರಿಗೆ ಸಂಕಷ್ಟ ಶುರುವಾಗಿದೆ. ಹಿಜಾಬ್ ಸಂಘರ್ಷದಿಂದ ಪದವಿ ಕಾಲೇಜು ರಜೆ ಹಿನ್ನಲೆ ಮೂರು ದಿನ ತಡವಾಗಿ ಪರೀಕ್ಷೆ ಆರಂಭ ಆಗುತ್ತಿದೆ. ಪ್ರಾಯೋಗಿಕ ಪರೀಕ್ಷೆ ಮುಗಿಸಲು ಮಾರ್ಚ್ 25ರ ವರೆಗೂ ಪದವಿ ಪೂರ್ವ ಮಂಡಳಿ ಅವಕಾಶ ನೀಡಿದೆ. ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಹಿಜಾಬ್ ವಿವಾದ ಬಹಳಷ್ಟು ಸಮಸ್ಯೆ ಉಂಟುಮಾಡಿದೆ. ಹಲವು ವಿದ್ಯಾರ್ಥಿಗಳು ಹಿಜಾಬ್ ಧರಿಸದೇ ತರಗತಿ ಪ್ರವೇಶಕ್ಕೆ ನಿರಾಕರಿಸಿದ್ದಾರೆ. ಈ ಹಿನ್ನೆಲೆ, ಪರೀಕ್ಚೆಗೆ ಹಾಜರಾಗದಿದ್ದರೆ ಮತ್ತೆ ಸಮಸ್ಯೆ ಉಂಟಾಗಲಿದೆ.