ಚರಣಜಿತ್ ಸಿಂಗ್ ಚನ್ನಿ ಪಂಜಾಬ್‌ನ ಮುಂದಿನ ಸಿಎಂ: ಕಾಂಗ್ರೆಸ್ ಘೋಷಣೆ

ಚರಣಜಿತ್ ಸಿಂಗ್ ಚನ್ನಿ ಪಂಜಾಬ್‌ನ ಮುಂದಿನ ಸಿಎಂ: ಕಾಂಗ್ರೆಸ್ ಘೋಷಣೆ

ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ ಪಂಜಾಬ್ ಸಿಎಂ ಯಾರಾಗ್ತಾರೆ ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ. ಪಂಜಾಬ್ ಮುಂದಿನ ಮುಖ್ಯಮಂತ್ರಿಯನ್ನಾಗಿ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಆಯ್ಕೆ ಮಾಡಿದೆ. 

ಈ ಸಂಬಂಧ ಟ್ವೀಟ್ ಮಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಪಂಜಾಬ್ ವ್ಯವಹಾರಗಳ ಉಸ್ತುವಾರಿ ಹರೀಶ್ ರಾವತ್, "ಪಂಜಾಬ್‌ನ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಚರಣಜಿತ್ ಸಿಂಗ್ ಚನ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲು ನನಗೆ ತುಂಬಾ ಸಂತೋಷವಾಗಿದೆ" ಎಂದು ಬರೆದುಕೊಂಡಿದ್ದಾರೆ.