ಪ್ರಧಾನಿ ಮೋದಿಗೆ ಕರೆ ಮಾಡಿ, ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಬೆಂಬಲ ಸೂಚಿಸಿದ ಕತಾರ್ ಅಮೀರ್

ಪ್ರಧಾನಿ ಮೋದಿಗೆ ಕರೆ ಮಾಡಿ, ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಬೆಂಬಲ ಸೂಚಿಸಿದ ಕತಾರ್ ಅಮೀರ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಕತಾರ್ ಅಮೀರ್ ಎಚ್‌ಎಚ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ, 26 ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂತಾಪ ಸೂಚಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ತಿಳಿಸಿದೆ. 

ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟ ಮತ್ತು ಅಪರಾಧಿಗಳಿಗೆ ಘೋರ ಶಿಕ್ಷೆ ವಿಧಿಸುವ ಎಲ್ಲಾ ಕ್ರಮಗಳಿಗೆ ಅವರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಎಂಇಎ ಮಾಹಿತಿ ನೀಡಿದೆ.