ದಾವಣಗೆರೆ: ವಾರದಲ್ಲಿ 1 ದಿನ ತಾಲೂಕು ಆಫೀಸ್‌ನಲ್ಲಿ ಜಿಲ್ಲಾಧಿಕಾರಿ ಕೆಲಸ ನಿರ್ವಹಿಸಬೇಕು; ಆರ್.ಅಶೋಕ್

ದಾವಣಗೆರೆ: ವಾರದಲ್ಲಿ 1 ದಿನ ತಾಲೂಕು ಆಫೀಸ್‌ನಲ್ಲಿ ಜಿಲ್ಲಾಧಿಕಾರಿ ಕೆಲಸ ನಿರ್ವಹಿಸಬೇಕು; ಆರ್.ಅಶೋಕ್

ದಾವಣಗೆರೆ: ವಾರದಲ್ಲಿ ಒಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗಳಲ್ಲಿ ಕೆಲಸ ಮಾಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ. 

ನಗರದ ನೂತನ ಕಾಲೇಜ್ ರಸ್ತೆ ಮೈದಾನದಲ್ಲಿ ಇಂದು ರಾಜ್ಯ ಮಟ್ಟದ ಗ್ರಾಮ ಲೆಕ್ಕಿಗರು ಹಾಗೂ ಗ್ರಾಮ ಸೇವಕರ ಸಮ್ಮೇಳನ ನಡೆಯಿತು. ರಾಜ್ಯದ 31 ಜಿಲ್ಲೆಗಳಿಂದ ಸಾವಿರಾರು ಗ್ರಾಮ ಲೆಕ್ಕಿಗರು ಗ್ರಾಮ ಸೇವಕರು ಸಮ್ಮೇಳನದಲ್ಲಿ ಪಾಲ್ಗೊಂಡು ಸಮ್ಮೇಳನ‌ ಯಶಸ್ವಿಗೊಳಿಸಿದ್ದಾರೆ. ಕಂದಾಯ ಸಚಿವ ಆರ್.ಅಶೋಕ್ ಸಂಜೆ ನಾಲ್ಕು ಗಂಟೆಗೆ ಕಾರ್ಯಕ್ರಮಕ್ಕೆ ಆಗಮಿಸಿ ಸಮ್ಮೇಳನ‌ದ ಕುರಿತು ಮಾತನಾಡಿ, ವಾರದಲ್ಲಿ ಒಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಯಲ್ಲಿ ಕೆಲಸ ಮಾಡುವ ಬಗ್ಗೆ ಒಂದು ವಾರದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು. ಗ್ರಾಮ ಲೆಕ್ಕಾಧಿಕಾರಿಗಳನ್ನು ಗ್ರಾಮ ಕಾರ್ಯನಿರ್ವಹಣಾಧಿಕಾರಿ ಎಂದು ಹುದ್ದೆಯ ಹೆಸರು ಬದಲಾವಣೆ ಮಾಡಲು ಬೇಡಿಕೆಯಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.