ಸರ್ಕಾರಿ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಸಿಹಿ ಸುದ್ದಿ ಕೊಟ್ಟ ಆರ್ ಅಶೋಕ

ಸರ್ಕಾರಿ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಸಿಹಿ ಸುದ್ದಿ ಕೊಟ್ಟ ಆರ್ ಅಶೋಕ

ಬೆಂಗಳೂರು: ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ 94c ಮತ್ತು 94cc ಅಡಿಯಲ್ಲಿ ನೀಡಿದ ಹಕ್ಕುಪತ್ರಗಳ ನೋಂದಣಿಯ ನಂತರ ಇ - ಸ್ವತ್ತು ಅಥವಾ ಇ -ಖಾತಾ ವ್ಯವಸ್ಥೆಯ ಮೂಲಕ ಖಾತೆ ಚೆಕ್ಕು ಬಂದಿ ಮಾಡಿಕೊಡಲು ಚಿಂತಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿ, 94c ಮತ್ತು 94cc ಅಡಿಯಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ಒಂದು ವರ್ಷದ ವರೆಗೆ ವಿಸ್ತರಿಸಲಾಗಿದೆ. ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಲಾಗುವುದು. ಇದುವರೆಗೆ 94ಸಿ ಅಡಿ 1,53,197 ಮಂದಿಗೆ ಹಕ್ಕುಪತ್ರ ನೀಡಲಾಗಿದೆ. 42,170 ಅರ್ಜಿಗಳು ಬಾಕಿ ಇವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.