ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್. ಅಶ್ವಿನ್

ಬ್ರಿಸ್ಬೇನ್ : ಭಾರತೀಯ ಕ್ರಿಕೆಟ್ ತಂಡದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಮಧ್ಯೆ ದಿಢೀರ್ ನಿವೃತ್ತಿ ನಿರ್ಧಾರ ಪ್ರಕಟಿಸಿರುವ ಅಶ್ವಿನ್, ಕ್ರೀಡಾಪ್ರೇಮಿಗಳು ಶಾಕ್ ಆಗಿದ್ದಾರೆ.
ಬ್ರಿಸ್ಬೇನ್‌ನ ಗಾಬಾದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯ ಡ್ರಾಗೊಂಡಿರುವ ಬೆನ್ನಲ್ಲೇ ಅಶ್ವಿನ್ ನಿವೃತ್ತಿ ನಿರ್ಧಾರವನ್ನು ಬಿಸಿಸಿಐ ಪ್ರಕಟಿಸಿದೆ.
ಪಂದ್ಯದ ನಂತರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಆರ್ ಅಶ್ವಿನ್ ತಮ್ಮ 14 ವರ್ಷಗಳ ಸುದೀರ್ಘ ಅಂತರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ.
ರವಿಚಂದ್ರನ್ ಅಶ್ವಿನ್ 106 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 200 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಅಲ್ಲದೆ ತಮ್ಮ ಕೆರಿಯರ್ನಲ್ಲಿ 27,246 ಎಸೆತಗಳನ್ನು ಎಸೆದಿರುವ ಅವರು 537 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅನಿಲ್ ಕುಂಬ್ಳೆ ಬಳಿಕ ಭಾರತದ ಪರ ಅತ್ಯಧಿಕ ವಿಕೆಟ್ ಕಬಳಿಸಿದ 2ನೇ ಬೌಲರ್ ಆಗಿದ್ದಾರೆ.
ಇನ್ನು 116 ಏಕದಿನ ಪಂದ್ಯಗಳಲ್ಲಿ 114 ಇನಿಂಗ್ಸ್ ಆಡಿರುವ ಅಶ್ವಿನ್ 6303 ಎಸೆತಗಳಲ್ಲಿ 156 ವಿಕೆಟ್ ಪಡೆದಿದ್ದಾರೆ. 65 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನ ಪ್ರತಿನಿಧಿಸಿರುವ ಅಶ್ವಿನ್ 72 ವಿಕೆಟ್ ಕಬಳಿಸಿದ್ದಾರೆ.