ಚಿಕ್ಕಮಗಳೂರು : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆ

ಚಿಕ್ಕಮಗಳೂರು : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆ

ಚಿಕ್ಕಮಗಳೂರು: ಡಿಸೆಂಬರ್ 20 ರಿಂದ 3 ದಿನಗಳ ಕಾಲ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಗೋಂಡೇದಹಳ್ಳಿ ಗ್ರಾಮದ 94 ವರ್ಷದ ಗೊ.ರು.ಚನ್ನಬಸಪ್ಪನವರು ಆಯ್ಕೆಯಾಗಿದ್ದಾರೆ. 

1992ರಿಂದ 1995ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ 18ನೇ ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿರುವ ಗೊ.ರು.ಚನ್ನಬಸಪ್ಪನವರು ಕೊಪ್ಪಳ (1993), ಮಂಡ್ಯ (1994 ), ಬಾಗಲಕೋಟೆಯ ಮುಧೋಳಗಳಲ್ಲಿ (1995) 62, 63 , 64ನೇ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.