ಆರ್. ಧ್ರುವನಾರಾಯಣ ನಿಧನ: ಕೆಪಿಸಿಸಿ ಕಚೇರಿಯಲ್ಲಿ ಸಂತಾಪ ಸಭೆ; ಭಾವುಕರಾದ ಕಾಂಗ್ರೆಸ್ ನಾಯಕರು

ಆರ್. ಧ್ರುವನಾರಾಯಣ ನಿಧನ: ಕೆಪಿಸಿಸಿ ಕಚೇರಿಯಲ್ಲಿ ಸಂತಾಪ ಸಭೆ; ಭಾವುಕರಾದ ಕಾಂಗ್ರೆಸ್ ನಾಯಕರು

ಬೆಂಗಳೂರು : ಮಾರ್ಚ್ 11: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನಿಧನರಾದ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಮತ್ತಿತರು ಸಂತಾಪ ಸಭೆ ನಡೆಸಿದರು. ಸಂತಾಪ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಆರ್. ಧ್ರುವನಾರಾಯಣ ಸಾವು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಅಘಾತ ಉಂಟು ಮಾಡಿದ ದಿನ. ಭಗವಂತ ಏಕೆ ಕ್ರೂರಿ ಇದ್ದಾನೆ ಎಂದು ಅರ್ಥ ಆಗ್ತಿಲ್ಲ. ಅಜಾತಶತ್ರು ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಧ್ರವತಾರೆಯಾಗಿದ್ದರು. 'ದೇವರು ಇಷ್ಟೊಂದು ಕ್ರೂರಿ ಆಗಬಾರದಿತ್ತು. ದೇವರು ಇದ್ದಾನೋ ಇಲ್ಲವೋ ಅನ್ನುವಷ್ಟು ಅನುಮಾನವನ್ನು ಧ್ರುವನಾರಾಯಣ ಸಾವು ತಂದಿದೆ. ಧ್ರುವ ನಮ್ಮ ಕಾರ್ಯಾಧ್ಯಕ್ಷ ಎಂಬುದಕ್ಕಿಂತ ನಮ್ಮ ಕುಟುಂಬದ ಸದಸ್ಯ, ಸಹೋದರನಂತಿದ್ದರು. ನಮ್ಮ ಹೃದಯಕ್ಕೆ ಹತ್ತಿರವಾಗಿದ್ದಾರೆ. ಅವರ ಅಗಲಿಕೆ ಬಗ್ಗೆ ಏನು ಹೇಳಬೇಕೋ ತಿಳಿಯುತ್ತಿಲ್ಲ ಎಂದು ಡಿ ಕೆ ಶಿವಕುಮಾರ್ ಭಾವುಕರಾದರು.