ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ

ಭಾರತದ ಪುರುಷರ ಕ್ರಿಕೆಟ್ ತಂಡದ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ನೇಮಿಸಲಾಗಿದೆ. ಭಾರತದ ಮಾಜಿ ನಾಯಕ ನ್ಯೂಜಿಲೆಂಡ್ ವಿರುದ್ಧ ಮುಂಬರುವ ಸರಣಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಅವರ ಕಾರ್ಯಾವಧಿ ಮುಗಿಯಲಿದೆ. ಅತ್ತ ವಿಶ್ವಕಪ್ ಬೆನ್ನಲ್ಲೇ ಟೀಮ್ ಇಂಡಿಯಾ ನವೆಂಬರ್ 17 ರಿಂದ ನ್ಯೂಜಿಲೆಂಡ್ ವಿರುದ್ದ ಸರಣಿ ಆಡಬೇಕಿದ್ದು, ಈ ಸರಣಿಯೊಂದಿಗೆ ರಾಹುಲ್ ದ್ರಾವಿಡ್ ಅವರ ಕೋಚಿಂಗ್ ಕೆಲಸ ಶುರುವಾಗಲಿದೆ. ಈ ಹಿಂದೆ ಅಂಡರ್ 19 ಟೀಮ್ ಇಂಡಿಯಾ ಹಾಗೂ ಭಾರತ ಎ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ರಾಹುಲ್ ದ್ರಾವಿಡ್ ಕಳೆದ ಬಾರಿ ಶ್ರೀಲಂಕಾ ಪ್ರವಾಸದಲ್ಲಿ ಭಾರತ ತಂಡದ ಹಂಗಾಮಿ ಕೋಚ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ಅಂತಿಮವಾಗಿ ಅವಿರೋಧವಾಗಿ ದ್ರಾವಿಡ್ ಅವರನ್ನು ಬಿಸಿಸಿಐ ಟೀಮ್ ಇಂಡಿಯಾ ಕೋಚ್ ಆಗಿ ಆಯ್ಕೆ ಮಾಡಿದೆ.