ಇ.ಡಿ ಅಧಿಕಾರಿಗಳಿಂದ ರಾಹುಲ್ ಗಾಂಧಿ ವಿಚಾರಣೆ ಮುಕ್ತಾಯ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಜಾರಿ ನಿರ್ದೇಶನಾಲಯ (ಇ.ಡಿ) ಎದುರು ವಿಚಾರಣೆಗೆ ಹಾಜರಾದರು. ಸದ್ಯ ವಿಚಾರಣೆ ಮುಕ್ತಾಯವಾಗಿದ್ದು, ಸುಮಾರು 10 ಗಂಟೆಗಳ ಕಾಲ ರಾಹುಲ್ ಗಾಂಧಿ ಅವರು ಇ.ಡಿ ವಿಚಾರಣೆ ಎದುರಿಸಿದ್ದಾರೆ.