ನಾಳೆ ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ - ಶಿವಮೊಗ್ಗ, ರಾಯಚೂರಿನಲ್ಲಿ ಅದ್ದೂರಿ ಪ್ರಚಾರ ಸಭೆ

ಬೆಂಗಳೂರು: ಮೊನ್ನೆ ತಾನೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಬಿಸಿಲ ನಗರಿ ಕಲಬುರಗಿಗೆ ಬಂದು ಹೋದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದು, ರಾಜ್ಯದ ಎರಡನೇ ಹಂತದ ಹದಿನಾಲ್ಕು ಕ್ಷೇತ್ರಗಳ ಪೈಕಿ ಶಿವಮೊಗ್ಗ ಮತ್ತು ರಾಯಚೂರು ಜಿಲ್ಲೆಗಳಿಗೆ ಭೇಟಿ ಕೊಡಲಿದ್ದಾರೆ.
ಗುರುವಾರ ಮದ್ಯಾಹ್ನ ಒಂದು ಗಂಟೆಗೆ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಾಡಾದ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಬಳಿಕ ಅಲ್ಲಿಂದ ರಾಯಚೂರಿನತ್ತ ತೆರಳಲಿದ್ದಾರೆ. ರಾಯಚೂರಿನಲ್ಲಿ ಸಂಜೆ 4-25ರ ಹೊತ್ರಿಗೆ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ. ಬಳಿಕ ರಾತ್ರಿ ದೆಹಲಿಯತ್ತ ಮುಖ ಮಾಡಲಿದ್ದಾರೆಂದು ಕಾಂಗ್ರೆಸ್ ನ ಆಪ್ತ ಮೂಕಗಳು ತಿಳಿಸಿವೆ.