ರಾಹುಲ್ ಗಾಂಧಿಗೆ ವಿರೋಧ ಪಕ್ಷದ ನಾಯಕನ ಪಟ್ಟ - ನಿರ್ಣಯವನ್ನು ಅಂಗೀಕರಿಸಿದ ಕಾಂಗ್ರೆಸ್

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯರು ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವಂತೆ ವಿನಂತಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ. ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವುದಾಗಿ ಸಿಡಬ್ಲ್ಯುಸಿಗೆ ತಿಳಿಸಿದ್ದಾರೆ ಎಂದು ಕಾಂಗ್ರೆಸ್‌ನ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ ನಾಯಕ ರಾಹುಲ್ ವಯನಾಡ್ ಮತ್ತು ರಾಯ್ ಬರೇಲಿಯಿಂದ ಗೆದ್ದಿದ್ದಾರೆ.