ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಮಳೆ ಸುರಿಯುವ ಮುನ್ಸೂಚನೆ

ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಮಳೆ ಸುರಿಯುವ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕದ ಕೆಲವೆಡೆ ಮಳೆಯಾಗುವ ಸೂಚನೆಯನ್ನು ಭಾರತ ಹವಾಮಾನ ಇಲಾಖೆ (ಐಎಂಡಿ) ನೀಡಿದೆ. 

ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿಗೆ ಮಳೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಶೀತ ಗಾಳಿ ಮತ್ತು ಒಣ ಹವಾಮಾನ ಮುಂದುವರಿಯಲಿದೆ.