ಮುಂದಿನ 48 ಗಂಟೆಯಲ್ಲಿ 9 ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ-ಹವಾಮಾನ ಇಲಾಖೆ

ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ರಾಜ್ಯದ 9 ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ , ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ , ರಾಮನಗರ, ಮಂಡ್ಯ, ಮೈಸೂರು, ಹಾಸನ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇನ್ನೆರಡು ದಿನ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ವೇಳೆ ಜಿಟಿ ಜಿಟಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.