ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಸಾಧ್ಯತೆ.!- ಕರಾವಳಿ ಭಾಗದಲ್ಲಿ ರೆಡ್​ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಸಾಧ್ಯತೆ.!- ಕರಾವಳಿ ಭಾಗದಲ್ಲಿ ರೆಡ್​ ಅಲರ್ಟ್​ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದ ಜನರು ಈಗಾಗಲೇ ತತ್ತರಿಸಿ ಹೋಗಿದ್ದಾರೆ. ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೇ ಇನ್ನೂ ಮೂರು ದಿನ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಜುಲೈ 9ರಿಂದ ಮೂರು ದಿನ ಭಾರೀ ಮಳೆಯಾಗಲಿದೆ. ಹಲವು ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ಯೆಲ್ಲೋ ಅಲರ್ಟ್ ಕೂಡ ಹವಾಮಾನ ಇಲಾಖೆ ಘೋಷಿಸಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಹಲವಡೆ ಭಾರೀ ಮಳೆಯಾದರೇ, ಇನ್ನುಳಿದೆಡೆ ಜಿಟಿ ಜಿಟಿ ಮಳೆಯಾಗಿದೆ. ಇಂದೂ ಸಹ ನಗರದಲ್ಲಿ ತುಂತುರು ಮಳೆ ನಿರೀಕ್ಷೆ ಮಾಡಲಾಗಿದೆ.