ಬೆಂಗಳೂರು: 4 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ ಸಾಧ್ಯತೆ - ಹವಾಮಾನ ಇಲಾಖೆ

ಬೆಂಗಳೂರು: 4 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ ಸಾಧ್ಯತೆ - ಹವಾಮಾನ ಇಲಾಖೆ

ಬೆಂಗಳೂರು: ಮುಂದಿನ 4 ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

 

ಏಪ್ರಿಲ್ 4 ರ ವರೆಗೆ ಮಳೆ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ. ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ ಸಾಧ್ಯತೆ ಇದೆ. 

 

ಮೋಡ ಕವಿದ ವಾತಾವರಣದೊಂದಿಗೆ ಗಾಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.