ರಾಜ್ಯಸಭೆಯಲ್ಲಿ ಕೋಲಾಹಲ ಎಬ್ಬಿಸಿದ 8 ಸದಸ್ಯರ ಅಮಾನತು

ನವದೆಹಲಿ: ರಾಜ್ಯಸಭೆ ಕಲಾಪದ ವೇಳೆ ಅಸಭ್ಯ ವರ್ತನೆ ತೋರಿದ 8 ವಿಪಕ್ಷ ಸದಸ್ಯರನ್ನು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಇಂದು ಅಮಾನತು ಮಾಡಿದ್ದಾರೆ.
ಕೃಷಿ ಮಸೂದೆ ಅಂಗೀಕಾರದ ವೇಳೆ ಕೋಲಾಹಲ ಸೃಷ್ಟಿಸಿ ಕಲಾಪಕ್ಕೆ ಅಡ್ಡಿ ಪಡಿಸಿದ ಹಿನ್ನಲೆ ಮತ್ತು ಉಪ ಸಭಾಪತಿ ಅವರನ್ನು ಅನುಚಿತವಾಗಿ ನಡೆಸಿಕೊಂಡ ಆರೋಪ ಮತ್ತು ಅಶಿಸ್ತಿನ ವರ್ತನೆ ಮೇರೆಗೆ ರಾಜ್ಯಸಭಾ ಸದಸ್ಯರಾದ ಡೆರೆಕ್ ಒ ಬ್ರಿಯಾನ್, ಸಂಜಯ್ ಸಿಂಗ್, ರಾಜು ಸತವ್, ಕೆ.ಕೆ.ರಾಗೇಶ್, ರಿಪೂನ್ ಬೋರಾ, ಡೋಲಾ ಸೇನ್, ಸೈಯದ್ ನಜೀರ್ ಹುಸೇನ್ ಮತ್ತು ಎಲಮರನ್ ಕರೀಮ್ ಅವರನ್ನು ಒಂದು ವಾರ ಅಮಾನತುಗೊಳಿಸಲಾಗಿದೆ ಎಂದು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ.