ರಾಜ್ಯಸಭಾ ಚುನಾವಣೆ: 5ನೇ ಅಭ್ಯರ್ಥಿಯಾಗಿ ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಕಣಕ್ಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ನಿಂದ ಅಭ್ಯರ್ಥಿಯನ್ನು ಕಣಕ್ಕಿಳಿದಿದ್ದಾರೆ. ಇಂದು ಎನ್ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ.
ಈ ಕುರಿತು ಮಾತನಾಡಿದ್ದ ಕುಪೇಂದ್ರ ರೆಡ್ಡಿ, ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸುವಂತೆ ಸೂಚಿಸಿದ್ದಾರೆ. ಅದರಂತೆಯೇ ಇದೀಗ ಎಚ್ಡಿಕೆ ಹಾಗೂ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ಕುರಿತು ಎಚ್ಡಿಕೆ ಮಾಡಿದ ಟ್ವೀಟ್ ಹೀಗಿದೆ.
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯ ಜೆಡಿಎಸ್- ಬಿಜೆಪಿ ಮೈತ್ರಿಕೂಟದ (NDA) ಅಭ್ಯರ್ಥಿಯಾಗಿ ಮಾಜಿ ಸಂಸದರಾದ ಡಿ.ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸಿದರು. ಬಿಜೆಪಿ ಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ ಮುಂತಾದವರು ಜತೆಯಲ್ಲಿದ್ದರು ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.