ಪತ್ನಿಯ ಪರ ಪ್ರಚಾರದಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ರವೀಂದ್ರ ಜಡೇಜಾ

ಪತ್ನಿಯ ಪರ ಪ್ರಚಾರದಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ರವೀಂದ್ರ ಜಡೇಜಾ

ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನ ಕ್ರಿಕೆಟಿಗ ರವೀಂದ್ರ ಜಡೇಜಾ ಅವರು ತಮ್ಮ ಪತ್ನಿ ರಿವಾಬಾ ಪರ ಪ್ರಚಾರ ನಡೆಸುತ್ತಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. 

ಪ್ರಧಾನಿ ಮೋದಿ ಅವರೊಂದಿಗಿನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಜಡೇಜಾ, "ನಮ್ಮ ಹೆಮ್ಮೆಯನ್ನು ಪೂರೈಸಲು ಕೃತಜ್ಞನಾಗಿದ್ದೇನೆ' ಎಂದು ಬರೆದುಕೊಂಡಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರ ಜೋರಾಗಿದೆ. 2019ರಲ್ಲಿ ಬಿಜೆಪಿ ಸೇರಿದ್ದ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಕೂಡ ಜಾಮ್‌ನಗರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.