ಬಿಜೆಪಿ ಟಿಕೆಟ್ ಸಿಗುತ್ತಿದ್ದಂತೆ ಮೋದಿಗೆ ಧನ್ಯವಾದ ತಿಳಿಸಿದ ಜಡೇಜಾ ಪತ್ನಿ ರಿವಾಬಾ

ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣೆ ಭರ್ಜರಿ ಫೈಟ್ ಶುರುವಾಗಿದೆ. ಈ ಮಧ್ಯೆ ಟೀಂ ಇಂಡಿಯಾ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರ ಪತ್ನಿಗೆ ಬಿಜೆಪಿ ಟಿಕೆಟ್ ನೀಡಿದೆ.
ಜಾಮ್‌ನಗರ ಉತ್ತರ ಕ್ಷೇತ್ರದಿಂದ ಗುಜರಾತ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಪಡೆದ ನಂತರ, ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. "ಪ್ರಗತಿ ಮತ್ತು ಅಭಿವೃದ್ಧಿಯ ವಿಷಯವು ಮುಖ್ಯವಾಗಿದೆ. ಪಕ್ಷವು ನನ್ನ ಮೇಲೆ ನಂಬಿಕೆ ಇಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ಧನ್ಯವಾದ ತಿಳಿಸಲು ಬಯಸುತ್ತೇನೆ" ಎಂದು ರಿವಾಬಾ ಹೇಳಿದ್ದಾರೆ. ಬಿಜೆಪಿ ಇಂದು 160 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.