ಬೆಂಗಳೂರು : ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೊಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ - ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೊಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ - ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ತಂಡ ಜಯಗಳಿಸಿರೋದಕ್ಕೆ ಸಿಎಂ ಸಿದ್ದರಾಮಯ್ಯ ಟ್ವಿಟ್ ಮೂಲಕ ಅಭಿನಂದಿಸಿದ್ದಾರೆ. 

ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ. ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. 

ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್‌ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಇದು ಇತಿಹಾಸ ಸೃಷ್ಟಿಸಿದ ದಿನ ಕೊನೆಯದಾಗಿ, ಈ ಸಲ ಕಪ್ ನಮ್ದೇ ಎಂದು ಬಣ್ಣಿಸಿದ್ದಾರೆ.