ನಾಳೆ ಧಾರವಾಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ.. ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ

ಧಾರವಾಡ: ಮುಂದಿನ ಮೂರು ಹಾಗೂ ನಾಲ್ಕು ದಿನಗಳ ಕಾಲ ಧಾರವಾಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಧಾರವಾಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ ಮೂರು ಹಾಗೂ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಧಾರವಾಡ ಜಿಲ್ಲೆಯ ಬೆಣ್ಣಿ ಹಾಗೂ ತುಪ್ಪರಿ ಹಳ್ಳದ ಅಚ್ಚುಕಟ್ಟು ಪ್ರದೇಶದಲ್ಲಿನ ಜನ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಅಲ್ಲದೇ ಆಯಾ ಗ್ರಾಮಗಳ ಗ್ರಾಮ ಪಂಚಾಯ್ತಿ ವತಿಯಿಂದ ಸಾರ್ವಜನಿಕರಲ್ಲಿ ಎಚ್ಚರಿಕೆ ಸಂದೇಶ ರವಾನಿಸಲು ಸೂಚಿಸಲಾಗಿದ್ದು, ಸಾರ್ವಜನಿಕರು ಕೂಡ ಎಚ್ಚರಿಕೆಯಿಂದ ಇರುವಂತೆ ಧಾರವಾಡ ಜಿಲ್ಲಾಡಳಿತ ಸೂಚಿಸಿದೆ