ರಾಜ್ಯದ ಪ್ರೌಢಶಾಲೆ ಶಿಕ್ಷಕರ ಬೇಸಿಗೆ ರಜೆಗೆ ಕತ್ತರಿ - ಇಂದಿನಿಂದ ವಿಶೇಷ ಕ್ಲಾಸ್ ನಡೆಸಲು ಸೂಚನೆ

ರಾಜ್ಯದ ಪ್ರೌಢಶಾಲೆ ಶಿಕ್ಷಕರ ಬೇಸಿಗೆ ರಜೆಗೆ ಕತ್ತರಿ - ಇಂದಿನಿಂದ ವಿಶೇಷ ಕ್ಲಾಸ್ ನಡೆಸಲು ಸೂಚನೆ

ಬೆಂಗಳೂರು: ಲೋಕಸಭೆ ಚುನಾವಣೆ ಕಾರ್ಯಗಳಿಂದ ನಿರಾಳರಾಗಿದ್ದ ರಾಜ್ಯದ ಪ್ರೌಢಶಾಲೆ ಶಿಕ್ಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶಾಕ್ ನೀಡಿದೆ. 

ಹೌದು. ಜೂನ್-ಜುಲೈನಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ-2ಗೆ ನೋಂದಾಯಿಸಿರುವ ವಿದ್ಯಾರ್ಥಿಗಳಿಗೆ ಮೇ 15ರಿಂದ ಜೂನ್ 5ರವರೆಗೆ ಆಯಾ ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತರಾತುರಿಯಲ್ಲಿ ನಿರ್ದೇಶನ ನೀಡಿದೆ. ಆದ್ದರಿಂದ ಮೇ 29ರ ತನಕ ಶಾಲೆಗಳಿಗೆ ರಜೆ ಇದ್ದರೂ ಸಹ ಶಿಕ್ಷಕರು ಶಾಲೆಗಳಿಗೆ ಮೇ 15ರಿಂದಲೇ ಆಗಮಿಸಬೇಕಿದೆ. 

ಮೇ 29ರ ತನಕ ಶಾಲೆಗೆ ಬೇಸಿಗೆ ರಜೆ ಇದ್ದರೂ ಸಹ ಮೇ 15ರಿಂದ ಶಾಲೆಗೆ ಆಗಮಿಸುವಂತೆ ಸೂಚನೆ ನೀಡಿರುವುದಕ್ಕೆ ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಈ ಕುರಿತು ಡಿಡಿಪಿಐಗೆ ಮನವಿ ಸಲ್ಲಿಕೆ ಮಾಡಲು ಮುಂದಾಗಿದ್ದಾರೆ.