ಖ್ಯಾತ ಶಿಕ್ಷಣ ತಜ್ಞ, PES ಶಿಕ್ಷಣ ಸಂಸ್ಥೆ ಸಂಸ್ಥಾಪಕ ಡಾ. ಎಂ.ಆರ್‌ ದೊರೆಸ್ವಾಮಿ ನಿಧನ

ಖ್ಯಾತ ಶಿಕ್ಷಣ ತಜ್ಞ, PES ಶಿಕ್ಷಣ ಸಂಸ್ಥೆ ಸಂಸ್ಥಾಪಕ ಡಾ. ಎಂ.ಆರ್‌ ದೊರೆಸ್ವಾಮಿ ನಿಧನ

ಬೆಂಗಳೂರು:ಖ್ಯಾತ ಶಿಕ್ಷಣ ತಜ್ಞ, ಕರ್ನಾಟಕದ ಶಿಕ್ಷಣದ ಖ್ಯಾತಿಯನ್ನು ಜಾಗತಿಕ ಮಟ್ಟದಲ್ಲಿ ಸಾರಲು ಸಾಧ್ಯವಾಗುವಂತಹ ಪಿಇಎಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಡಾ.ಎಂ.ಆರ್. ದೊರೆಸ್ವಾಮಿ ನಾಯ್ಡು ಇಂದು ಸಂಜೆ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. 

ಪಿಇಎಸ್ ವಿಶ್ವ ವಿದ್ಯಾಲಯದ ಕುಲಪತಿ ಡಾ.ಎಂ.ಆರ್. ದೊರೆಸ್ವಾಮಿ (89) ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ಸ್ವಗೃಹದಲ್ಲಿ ಗುರುವಾರ (ಮಾರ್ಚ್‌ 6ರಂದು)ನಿಧನರಾಗಿದ್ದಾರೆ. ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ 4 ಮೊಮ್ಮಕ್ಕಳನ್ನು ಅಗಲಿದ್ದಾರೆ. ಎಂ.ಆರ್. ದೊರೆಸ್ವಾಮಿ ನಾಯ್ಡು ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. 

ಶುಕ್ರವಾರ ಮಧ್ಯಾಹ್ನದವರೆಗೆ ಸ್ವ-ಗೃಹದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ನಾಳೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪ್ರಮುಖ ಗಣ್ಯರು ದೊರೆಸ್ವಾಮಿ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ನಾಳೆ ಪಿಇಎಸ್ ವಿಶ್ವವಿದ್ಯಾಲಯದ ಎಲ್ಲಾ ತರಗತಿಗಳನ್ನು ರದ್ದುಗೊಳಿಸಲಾಗಿದೆ. 

1972ರಲ್ಲಿ, ಬೆಂಗಳೂರಿನಲ್ಲಿ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳೊಂದಿಗೆ PES ಶಿಕ್ಷಣ ಸಂಸ್ಥೆಯನ್ನು ಎಂ ಆರ್ ದೊರೆಸ್ವಾಮಿ ಯವರು ಸ್ಥಾಪಿಸಿದರು. ಇಂದು PES ಶಿಕ್ಷಣ ಸಂಸ್ಥೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ವಿವಿಧೆಡೆ 18,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. PES ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನ 2001ರಲ್ಲಿ ಸ್ಥಾಪಿಸಿದ್ದರು.