ಬ್ರೇಕಿಂಗ್: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಕೇಸ್ - ಪತ್ನಿ ಪಲ್ಲವಿಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣದಲ್ಲಿ ಅವರ ಪತ್ನಿ, ಆರೋಪಿ ಪಲ್ಲವಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾಳೆ.
ಆರೋಪಿ ಪಲ್ಲವಿಯನ್ನು ಪೊಲೀಸರು ಬಂಧಿಸಿ ಇಂದು ಬೆಂಗಳೂರಿನ 39ನೇ ಎಸಿಎಂಎಂ ಕೋರ್ಟ್‌ಗೆ ಹಾಜರು ಪಡಿಸಿದರು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶರು ಮೇ 3ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ.