ಕೋಲಾರ ಪತ್ರಕರ್ತರ ಸಂಘದ ಕಲ್ಯಾಣನಿಧಿಗೆ 25 ಲಕ್ಷ ರೂ. ಬಿಡುಗಡೆ

ಕೋಲಾರ ಪತ್ರಕರ್ತರ ಸಂಘದ ಕಲ್ಯಾಣನಿಧಿಗೆ 25 ಲಕ್ಷ ರೂ. ಬಿಡುಗಡೆ

ಕೋಲಾರ : ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದ 25 ಲಕ್ಷರೂ ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ. 

2022 ಫೆಬ್ರವರಿ 17 ರಂದು ಬಿ.ವಿ. ಗೋಪಿನಾಥ್ ಅಧ್ಯಕ್ಷತೆಯ ಪದಾಧಿಕಾರಿಗಳ ತಂಡವು ಆಯ್ಕೆಯಾಗಿದ್ದ ಸಂದರ್ಭದಲ್ಲಿ ಪತ್ರಕರ್ತರ ಆಪತ್ಕಾಲೀನ ಸಂದರ್ಭದಲ್ಲಿ ಒಂದು ಕೋಟಿ ರೂ ಕಲ್ಯಾಣನಿಧಿಯನ್ನು ಸ್ಥಾಪನೆ ಮಾಡುವುದಾಗಿ ಘೋಷಿಸಿದರು. 

ಇದಕ್ಕೆ ಪೂರಕವಾಗಿ 2022ರ ಜುಲೈ 1 ರಂದು ನಡೆದ ಪತ್ರಿಕಾ ದಿನಾಚರಣೆ ಉದ್ಘಾಟಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಸಂಘದ ಮನವಿ ಮೇರೆಗೆ ಕಲ್ಯಾಣನಿಧಿಗೆ ಮುಖ್ಯಮಂತ್ರಿಗಳಿಂದ ಅನುದಾನ ದೊರಕಿಸುವ ಭರವಸೆ ನೀಡಿದ್ದರು. ತಾವು ನೀಡಿದ್ದ ವಾಗ್ದಾನದಂತೆ ಕೆ.ವಿ.ಪ್ರಭಾಕರ್ ಅವರು ಮಾಡಿದ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕಲ್ಯಾಣನಿಧಿಗೆ 25 ಲಕ್ಷರೂ ಮಂಜೂರು ಮಾಡಿದ್ದರು. ಇದೀಗ ಅನುದಾನದ ಹಣ 25 ಲಕ್ಷರೂ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ.