ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 36 ಪೈಸೆ ಏರಿಕೆ

ಮುಂಬೈ: ದೇಶೀಯ ಷೇರುಪೇಟೆಯು ಏರಿಕೆಯ ಹಳಿಗೆ ಮರಳಿರುವುದು ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿಗೆ ಬಲ ನೀಡಿದೆ.
ಶುಕ್ರವಾರ ನಡೆದ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 36 ಪೈಸೆ ಏರಿಕೆಯಾಗಿದೆ. ಪ್ರತೀ ಡಾಲರ್ ಮೌಲ್ಯ ₹86 ಆಗಿದೆ. ಸತತ ಆರು ದಿನಗಳ ವಹಿವಾಟಿನಲ್ಲಿ ಒಟ್ಟು 123 ಪೈಸೆ ಏರಿಕೆಯಾಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದೆ. ದೇಶೀಯ ಷೇರುಪೇಟೆಯಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಷೇರುಗಳನ್ನು ಖರೀದಿಸಿದ್ದಾರೆ. ಇದು ರೂಪಾಯಿ ಬಲಗೊಳ್ಳಲು ನೆರವಾಗಿದೆ ಎಂದು ಮಿರೇ ಅಸೆಟ್ ಶೇರ್‌ಖಾನ್ ಸಂಸ್ಥೆಯ ಸಂಶೋಧನಾ ವಿಶ್ಲೇಷಕ ಅನುಜ್ ಚೌಧರಿ ಹೇಳಿದ್ದಾರೆ.