SA vs IND 2nd T20: ಇಂದು ಭಾರತ-ದಕ್ಷಿಣ ಆಫ್ರಿಕಾ ನಡುವೆ ಕದನ

SA vs IND 2nd T20: ಇಂದು ಭಾರತ-ದಕ್ಷಿಣ ಆಫ್ರಿಕಾ ನಡುವೆ ಕದನ

ಪೋರ್ಟ್ ಎಲಿಝಬೆತ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವು ಭಾನುವಾರ (ನವೆಂಬರ್ 9) ಜಿಕೆಬೆಹರಾದಲ್ಲಿರುವ ಸೇಂಟ್ ಜಾರ್ಜ್ ಕ್ರೀಡಾಂಗಣದಲ್ಲಿ ನಡೆಯಲಿದೆ. 

ಡರ್ಬನ್‌ನಲ್ಲಿ ನಡೆದ ಸರಣಿಯ ಮೊದಲ ಟಿ20 ಪಂದ್ಯವು ಶುಕ್ರವಾರ ನಡೆದಿತ್ತು. ಈ ಪಂದ್ಯವನ್ನು ಭಾರತ ತಂಡ 61 ರನ್​ಗಳಿಂದ ಗೆದ್ದುಕೊಂಡಿತ್ತು. ಉಭಯ ತಂಡಗಳು ಇಂದು ಟಿ-20 ಸರಣಿಯ ಎರಡನೇ ಪಂದ್ಯವನ್ನು ಆಡಲಿದ್ದು, ಸೂರ್ಯಕುಮಾರ್ ಬಳಗವು ತನ್ನ ಮೊದಲ ಪಂದ್ಯದ ಪ್ರದರ್ಶನವನ್ನು ಪುನರಾವರ್ತಿಸುವ ವಿಶ್ವಾಸದಲ್ಲಿದೆ. 

ಫಾರ್ಮ್‌ನಲ್ಲಿರುವ ವಿಕೆಟ್‌ಕೀಪರ್-ಬ್ಯಾಟರ್ ಸ್ಯಾಮ್ಸನ್ ಮೇಲೆ ಹೆಚ್ಚು ಹೊರೆ ಬೀಳದ ಹಾಗೆ ಭಾರತ ತಂಡವು ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕಾಗಿದೆ. ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ತನ್ನ ಕಳಪೆ ಪ್ರದರ್ಶನ ಮುಂದುವರಿಸಿ ಅವಕಾಶಗಳನ್ನು ಕೈಚೆಲ್ಲುತ್ತಿರುವುದು ಟೀಂ ಮ್ಯಾನೇಜ್‌ಮೆಂಟ್‌ನ ಚಿಂತೆಗೆ ಕಾರಣವಾಗಿದೆ. 

ಈ ವರ್ಷಾರಂಭದಲ್ಲಿ ಝಿಂಬಾಬ್ವೆ ವಿರುದ್ಧ ಹರಾರೆಯಲ್ಲಿ 47 ಎಸೆತಗಳಲ್ಲಿ ಶತಕ ಗಳಿಸಿದ ನಂತರ ಅಭಿಷೇಕ್ ಅವರು ರನ್‌ಗಾಗಿ ಪರದಾಟ ನಡೆಸುತ್ತಿದ್ದು 0,10,14,16, 15,4 ಹಾಗೂ 7 ರನ್ ಗಳಿಸಿದ್ದಾರೆ.