ನನ್ನ ನಂಬಿಕೆಗಳೊಂದಿಗೆ ದೃಢವಾಗಿ ನಿಲ್ಲುತ್ತೇನೆ; ಸಮಸ್ಯೆ ಆಲಿಸಿದ ನಾಯಕ, ನಾಯಕಿಯರಿಗೆ ಧನ್ಯವಾದಗಳು : ಸಚಿನ್ ಪೈಲಟ್ ಟ್ವೀಟ್

ನವದೆಹಲಿ: ನನ್ನ ಹಾಗೂ ಬಂಡಾಯ ಶಾಸಕರ ಸಮಸ್ಯೆಗಳನ್ನು ಆಲಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ನಾಯಕಿ, ನಾಯಕ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಧನ್ಯವಾದಗಳು ಎಂದು ರಾಜಸ್ತಾನದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಟ್ವೀಟ್ ಮಾಡಿದ್ದಾರೆ.
“ನನ್ನ ನಂಬಿಕೆಗಳೊಂದಿಗೆ ದೃಢವಾಗಿ ನಿಲ್ಲುತ್ತೇನೆ. ಭಾರತದ ಉತ್ತಮತೆಗಾಗಿ ಕೆಲಸ ಮಾಡುತ್ತೇನೆ. ರಾಜಸ್ತಾನ ಜನತೆಗೆ ನೀಡಲಾಗಿರುವ ಭರವಸೆಗಳನ್ನು ತಲುಪಲು ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳ ರಕ್ಷಿಸಲು ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ.
ಸಚಿನ್ ಪೈಲಟ್ ಹಾಗೂ ಅವರ ಜೊತೆಗಿರುವ ಬಂಡಾಯ ಶಾಸಕರು ಎತ್ತಿರುವ ವಿಷಯಗಳ ಬಗ್ಗೆ ಗಮನಹರಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಈ ಹಿಂದೆ ತ್ರಿಸದಸ್ಯ ಸಮಿತಿ ರಚನೆ ಮಾಡಿದ್ದರು.
ಪ್ರಿಯಾಂಕಾ ಗಾಂಧಿ, ಕೆಸಿ ವೇಣುಗೋಪಾಲ್ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಹ್ಮದ್ ಪಟೇಲ್ ನೇತೃತ್ವದ ತ್ರಿಸದಸ್ಯ ಸಮಿತಿಯನ್ನು ನೇಮಕ ಮಾಡಲಾಗಿದೆ.