ಕಲಬುರಗಿ: 2618 ಶಿಕ್ಷಕರ ಹುದ್ದೆಗಳನ್ನು ಭರ್ತಿಗೆ ಮಂಜೂರಾತಿ - ಸಿಎಂ ಸಿದ್ದರಾಮಯ್ಯ

ಕಲಬುರಗಿ: 2618 ಶಿಕ್ಷಕರ ಹುದ್ದೆಗಳನ್ನು ಭರ್ತಿಗೆ ಮಂಜೂರಾತಿ - ಸಿಎಂ ಸಿದ್ದರಾಮಯ್ಯ

ಕಲಬುರಗಿ: ನಗರದಲ್ಲಿ ಡಿ,ಆರ್ ಮೈದಾನದಲ್ಲಿ ರಾಷ್ಟ್ರಧ್ವಜನರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗೆ ಕೆಕೆಆರ್ಡಿಬಿ ಮಂಡಳಿಯು ಅಕ್ಷರ ಅವಿಷ್ಕಾರ ಯೋಜನೆ ರೂಪಿಸಿದೆ. ಇದರ ಭಾಗವಾಗಿ ಪ್ರದೇಶದಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲೆ 2566, ಮತ್ತು ಪ್ರೌಢಶಾಲೆ 52 ಸೇರಿದಂತೆ ಒಟ್ಟು 200618 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಈಗಾಗಲೇ ಮಂಜೂರಾತಿ ನೀಡಿ 18.34 ಕೋಟಿ ರೂಪಾಯಿ ಅನುದಾನ ನೀಡಿದೆ ಇದು ಈ ಸರ್ಕಾರಕ್ಕೆ ಪ್ರದೇಶದಲ್ಲಿನ ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ನೀಡುತ್ತಿರುವ ಆದ್ಯತೆಗೆ ಸಾಕ್ಷಿಯಾಗಿದೆ ಎಂದರು