ಜಿಲ್ಲಾ ಪಂಚಾಯತ್ ನವೀಕರಿಸಿದ ಸಭಾಭವನ ಉದ್ಘಾಟಿಸಿದ ಸಂತೋಷ ಲಾಡ್

ಧಾರವಾಡ : ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಜಿಲ್ಲಾ ಪಂಚಾಯತಿಯ ನವೀಕರಿಸಿದ ಜಿಲ್ಲಾ ಪಂಚಾಯತ ಸಭಾಭವನವನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಶಾಸಕ ಅರವಿಂದ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಮುಖ್ಯ ಯೋಜನಾಧಿಕಾರಿ ದೀಪಕ್ ಮಡಿವಾಳರ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.