ಕೂತಹಲ ಕೆರಳಿಸಿದ HDK, HDD ಜೊತೆ ಸತೀಶ್ ಜಾರಕಿಹೊಳಿ‌ ಚರ್ಚೆ

ಕೂತಹಲ ಕೆರಳಿಸಿದ HDK, HDD ಜೊತೆ ಸತೀಶ್ ಜಾರಕಿಹೊಳಿ‌ ಚರ್ಚೆ

ನವದೆಹಲಿ: ರಾಜ್ಯ ಕಾಂಗ್ರೆಸ್‌ನಲ್ಲಿ ಹನಿಟ್ರ್ಯಾಪ್ ಪ್ರಕರಣ ಭಾರಿ ಸಂಚಲನ ಸೃಷ್ಟಿಸಿದೆ. ಹನಿಟ್ರ್ಯಾಪ್ ಯತ್ನಕ್ಕೆ ಸಂಬಂಧಿಸಿದಂತೆ ಈಗಾಗಲೇ ಗೃಹ ಸಚಿವರಿಗೆ ರಾಜಣ್ಣ ದೂರು ಸಹ ನೀಡಿದ್ದಾರೆ. ಇದರ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಹನಿಟ್ರ್ಯಾಪ್ ಹಿಂದಿನ ಕಾಣದ ಕೈಗಳ ಬಗ್ಗೆ ದೂರು ಸಹ ನೀಡಿದ್ದಾರೆ. ಇದರ ಜೊತೆಗೆ ದೆಹಲಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರೋದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. 

 

ದೆಹಲಿಯಲ್ಲಿ ಕುಮಾರಸ್ವಾಮಿ ನಿವಾಸದಲ್ಲಿ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಸಹ ಮಾಡಿದ್ದಾರೆ ಎನ್ನಲಾಗಿದೆ. ಇದೀಗ ದೆಹಲಿಯಲ್ಲಿ ಕುಮಾರಸ್ವಾಮಿ ಮತ್ತು ದೇವೇಗೌಡರನ್ನ ಸತೀಶ್ ಜಾರಕಿಹೊಳಿ ಭೇಟಿಯಾಗಿದಕ್ಕೆ ರಾಜಕೀಯ ಪಡಸಾಲೆಯಲ್ಲಿ ಶತ್ರುವಿನ ಶತ್ರು ಮಿತ್ರ ಎಂಬಂತೆ ಚರ್ಚೆಗಳು ನಡೆಯುತ್ತಿವೆ. ಮೇಲ್ನೋಟಕ್ಕೆ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಭೇಟಿಯಾಗಿದ್ದಾರೆ ಎಂದು ಹೇಳಿಕೆ ನೀಡಿದರು ಸಹ ಒಳ ರಾಜಕೀಯ ನೋಟ ಬೇರೆನೇ ಇದೆ ಎಂದು ವ್ಯಾಖ್ಯಾನಿಸುತ್ತಿದ್ದಾರೆ. ಕುಮಾರಸ್ವಾಮಿ ದೇವೇಗೌಡರ ಜೊತೆ ಚರ್ಚೆ ತಮ್ಮ ಪಕ್ಷದ ನಾಯಕನಿಗೆ ಏನೋ ಸಂದೇಶ ಕೊಡಲು ಸತೀಶ್ ಜಾರಕಿಹೊಳಿ ಯತ್ನಿಸಿದ್ರಾ ಎಂದೆಲ್ಲ ಚರ್ಚೆ ಆಗ್ತಿದೆ. ಸತೀಶ್ ಜಾರಕಿಹೊಳಿ ಮತ್ತು ಕುಮಾರಸ್ವಾಮಿ ಫೋಟೋ ಸದ್ಯಕ್ಕೆ ಎಲ್ಲೆಡೆ ತುಂಬಾ ವೈರಲ್ ಆಗ್ತಿದೆ. ರಾಜಕೀಯವಾಗಿ ಏನೇ ಚರ್ಚೆಗಳು ನಡೆದ್ರು ನಾವು ಇಲಾಖೆಯ ವಿಚಾರ ಚರ್ಚೆಯಾಗಿದೆ ಹಾಗೇ ಸೌಜನ್ಯದ ಭೇಟಿ ಎನ್ನುತ್ತಿದ್ದಾರೆ ಇಬ್ಬರೂ ನಾಯಕರು.